Latest

ಪಟಾಕಿ ನಿಷೇಧ ಮಾಡಿದ ರಾಜ್ಯ ಸರ್ಕಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಈ ಕುರಿತು ಮಾಹಿತಿ ನೀಡಿದ್ದು, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಾಟಿಕಿ ಮಾರಾಟ ಹಾಗೂ ಹಚ್ಚುವಿಕೆಯನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದರು.

ಪಟಾಕಿ ಹೊಗೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಕೊರೊನಾದಂತಹ ಈ ಸಂದರ್ಭದಲ್ಲಿ ಪಟಾಕಿಯಿಂದ ಇನ್ನಷ್ಟು ಆರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಹಾಗಾಗಿ ತಜ್ಞರ ಜೊತೆ ಆರೋಗ್ಯ ಇಲಾಖೆ ಅಧಿಕಾರಿಗಳು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದ್ದು, ಇದೀಗ ಅಂತಿಮವಾಗಿ ದೀಪಾವಳಿ ವೇಳೆ ಪಟಾಕಿ ನಿಷೇಧಕ್ಕೆ ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button