ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿಯಾಗಿ ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಬೆಂಗಾವಲು ಪಡೆಯ ಇಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಮಂಗಳೂರಿನಿಂದ ವಾಪಸ್ ಆಗುತ್ತಿದ್ದ ವೇಳೆ ಬೆಂಗಾವಲು ವಾಹನದ ಬ್ರೇಕ್ ಜಾಮ್ ಆಗಿ ವಾಹನ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಗಾಯಾಳು ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ