ಪ್ರಗತಿವಾಹಿನಿ ಸುದ್ದಿ; ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿಯವರನ್ನು ಸಿಬಿಐ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ನೀಡಿದೆ.
ನಿನ್ನೆ ಬಂಧನಕ್ಕೊಳಗಾಗಿದ್ದ ವಿನಯ್ ಕುಲ್ಕರ್ಣಿಯವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕುಲ್ಕರ್ಣಿಯವರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 32ನೇ ಸೆಷನ್ಸ್ ಕೋರ್ಟ್ ಗೆ ವಿನಯ್ ಕುಲ್ಕರ್ಣಿಯವರನ್ನು ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಮೂರು ದಿನಗಳ ಕಾಲ ವಿನಯ್ ಕುಲ್ಕರ್ಣಿಯವರನ್ನು ಸಿಬಿಐ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ನ.9ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ