
ಪ್ರಗತಿವಾಹಿನಿ ಸುದ್ದಿ; ಇಸ್ರೋ: ಭೂ ವೀಕ್ಷಣಾ ಉಪಗ್ರಹ ಇಒಎಸ್-1 ಸೇರಿದಂತೆ 10 ಉಪಗ್ರಹಗಳನ್ನು ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಮಧ್ಯಾಹ್ನ 3:2ಕ್ಕೆ ಪಿಎಸ್ಎಲ್ ವಿ-ಸಿ 49 ರಾಕೆಟ್ ಮೂಲಕ ಭೂ ವೀಕ್ಷಣಾ ಉಪಗ್ರಹ ಹಾಗೂ 9 ವಿದೇಶಿ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಇಒಎಸ್-1 ಭೂಮಿಯ ಸುತ್ತ ಸುತ್ತುವ ಉಪಗ್ರಹವಾಗಿದ್ದು, ಇದು ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕಾರ್ಯಗಳಿಗೆ ಉದ್ದೇಶಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ