Kannada NewsKarnataka NewsLatest
ಜನರ ಸಂಕಷ್ಟಗಳಿಗೆ ನಿರಂತರ ಸ್ಪಂದಿಸುವ ಲಕ್ಷ್ಮಿ ಹೆಬ್ಬಾಳಕರ್ – ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರದ ಜನರಿಗೆ ನಿರಂತರವಾಗಿ ಸ್ಪಂದಿಸುವ ಶಾಸಕಿಯಾಗಿದ್ದಾರೆ. ಕುಟುಂಬದ ಸದಸ್ಯರಿಗಿಂತ, ತಮ್ಮ ವಯಕ್ತಿಕ ಕಷ್ಟಕ್ಕಿಂತ ಹೆಚ್ಚಾಗಿ ಕ್ಷೇತ್ರದ ಜನರ ಕಷ್ಟಗಳಿಗೆ ಬೇಗ ಸ್ಪಂದಿಸುತ್ತಾರೆ. ಇಂತಹ ಶಾಸಕರು ತೀರಾ ಅಪರೂಪ ಎಂದು ಯುವ ಕಾಂಗ್ರೆಸ್ ಮುಖಂಡ ಚನ್ನನರಾಜ ಹಟ್ಟಿಹೊಳಿ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ 10 ಲಕ್ಷ ರೂ,ಗಳನ್ನು ಮಂಜೂರು ಮಾಡಲಾಗಿದೆ.
ಈ ಪೈಕಿ ಮೊದಲ ಕಂತಿನಲ್ಲಿ 5 ಲಕ್ಷ ರೂ,ಗಳ ಚೆಕ್ ನ್ನು ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ ಅವರೊಂದಿಗೆ ದೇವಸ್ಥಾನ ಕಮಿಟಿಯವರಿಗೆ ಹಸ್ತಾಂತರಿಸಿ ಅವರು ಮಾತನಾಡುತ್ತಿದ್ದರು.
ಪ್ರವಾಹ, ಕೊರೋನಾದಂತಹ ಕ್ಲಿಷ್ಟಕರ ಸಂದರ್ಭದಲ್ಲೂ ನೀವೆಲ್ಲ ನೋಡಿದ್ದೀರಿ. ಶಾಸಕರು ಯಾವ ಅಳುಕಿಲ್ಲದೆ, ವಿಶ್ರಾಂತಿಯನ್ನೂ ತೆಗೆದುಕೊಳ್ಳದೆ ಜನರೊಂದಿಗೆ ನಿಂತು ಕೆಲಸ ಮಾಡಿದ್ದಾರೆ. ತಮ್ಮ ಅನಾರೋಗ್ಯದ ಮಧ್ಯೆಯೂ ಕ್ಷೇತ್ರದ ಅಭಿವೃದ್ಧಿ, ಕ್ಷೇತ್ರದ ಜನರ ಸಂಕಷ್ಟವನ್ನು ಕಡೆಗಣಿಸಿಲ್ಲ ಎಂದು ಚನ್ನರಾಜ ಹೇಳಿದರು.
ಲಕ್ಷ್ಮಿ ಹೆಬ್ಬಾಳಕರ್ ಕೆಲಸದ ನಿಮಿತ್ತ ಬೆಂಗಳೂರು ಅಥವಾ ಬೇರೆ ಕಡೆ ಪ್ರವಾಸದಲ್ಲಿರುವಾಗಲೂ ಕ್ಷೇತ್ರದ ಜನರನ್ನು ಕಡೆಗಣಿಸದಂತೆ, ಎಲ್ಲ ರೀತಿಯ ಸಹಾಯ ಮಾಡುವಂತೆ ನನಗೆ ಹಾಗೂ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರಿಗೆ ಕಟ್ಟಪ್ಪಣೆ ಮಾಡಿದ್ದಾರೆ. ಹಾಗಾಗಿ ವರ್ಷದ 365 ದಿನವೂ, ದಿನದ 24 ಗಂಟೆಯೂ ನಿಮ್ಮ ಸೇವೆಗೆ ಶಾಸಕರ ಲಭ್ಯತೆ ಇದ್ದೇ ಇರುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ದೇವಸ್ಥಾನದ ಕಮೀಟಿಯವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ