Latest

ಶಿರಾದಲ್ಲಿ ಬಿಜೆಪಿ ಡೆಪಾಸಿಟ್ ಕಳೆದುಕೊಳ್ಳುವ ವಾತಾವರಣವಿತ್ತು ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ಶಿರಾದಲ್ಲಿ ಬಿಜೆಪಿ ಗೆಲ್ಲುವ ಬಗ್ಗೆ ಅನುಮಾನವಿತ್ತು. ಡೆಪಾಸಿಟ್ ಕಳೆದುಕೊಳ್ಳುವ ವಾತಾವರಣವಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಹಾರದಲ್ಲೂ ನಿತೀಶ್ ನೇತೃತ್ವದ ಆಡಳಿತ ಬರುವ ವಿಶ್ವಾಸವಿದೆ. ಆದರೆ ಏನಾಗುತ್ತೆ ಎಂಬುದನ್ನು ಕಾದುನೋಡಬೇಕಿದೆ. ಆರ್.ಆರ್.ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತವಾಗಿದೆ ಎಂದರು.

ಆರ್ ಆರ್ ಹಾಗೂ ಶಿರಾದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆಯ ವರದಿ ಕೂಡ ಬಂದಿದೆ. ಶಿರಾದಲ್ಲಿ ಗೆಲ್ಲುವ ವಿಶ್ವಾಸವಿರಲಿಲ್ಲ. ಡೆಪಾಸಿಟ್ ಕಳೆದುಕೊಳ್ಳುವ ವಾತಾವರಣವಿತ್ತು. ಆದರೆ ಈಗ ಆ ಕ್ಷೇತ್ರದಲ್ಲಿ ಗೆಲ್ಲುತ್ತಿರುವುದು ಸಂತಸದ ವಿಚಾರ. ಅಭಿವೃದ್ಧಿ ಹಿನ್ನೆಲೆಯಲ್ಲಿ ಮತಯಾಚಿಸಿದ್ದೇವೆ, ಹಾಗಾಗಿ ಮತದಾರರು ಬಿಜೆಪಿ ಗೆಲ್ಲಿಸಲಿದ್ದಾರೆ.

Home add -Advt

Related Articles

Back to top button