Latest

ಕೇಂದ್ರದ ವಿರುದ್ಧ ಸಿಡಿದೆದ್ದಿದ್ದ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದು, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.

ಸೆಂಥಿಲ್ ಮೂಲತ: ತಮಿಳುನಾಡಿನವರಾಗಿದ್ದು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳ ವಿರುದ್ಧ ಸಿಡಿದೆದ್ದು ಸೆಂಥಿಲ್ 2019ರ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಿದ್ದರು.

ಸಿಎಎ ಹಾಗೂ ಎನ್ ಆರ್ ಸಿ ಹೋರಾಟಗಳಲ್ಲಿ ತೊಡಗಿದ್ದ ಸಸಿಕಾಂತ್ ಸೆಂಥಿಲ್ ಇದೀಗ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದು, ನ.9ರಂದು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button