ಪ್ರಗತಿವಾಹಿನಿ ಸುದ್ದಿ; ಶಿರಸಿ: ಶಿರಸಿ ಪಟ್ಟಣದ ನೆಹರೂನಗರ ದಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಗೋಮಾಂಸವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 6560 ರೂ ಮೌಲ್ಯದ 26 ಕೆಜಿ 270 ಗ್ರಾಂ ಗೋಮಾಂಸವನ್ನು ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ.
ಕಾರವಾರ ಪೊಲೀಸ್ ಅಧೀಕ್ಷಕ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬದರಿನಾಥ, ಶಿರಸಿ ಪೊಲೀಸ್ ಉಪಾಧೀಕ್ಷಕ ಗೋಪಾಲಕೃಷ್ಣ ನಾಯಕ, ವೃತ್ತ ನಿರೀಕ್ಷಕ ಬಿ.ಯು ಪ್ರದೀಪ್ ಮಾರ್ಗದರ್ಶನದಲ್ಲಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದ ಸಿಬ್ಬಂದಿಗಳಾದ ಚಿದಾನಂದ ನಾಯ್ಕ, ಜೋಸೆಫ್ ರಾಜ್,ಅಶೋಕನಾಯ್ಕರವರನ್ನು ಒಳಗೊಂಡ ತಂಡ ಇಂದು ಬೆಳಗ್ಗೆ ದಾಳಿ ನಡೆಸಿದ್ದು ದಾಳಿ ವೇಳೆ ಆರೋಪಿ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಅಂದಾಜು 6560 ರೂ ಮೌಲ್ಯದ 26 ಕೆಜಿ 270 ಗ್ರಾಂ ಗೋಮಾಂಸ ಕೃತ್ಯಕ್ಕೆ ಬಳಸಲಾದ ಅಂದಾಜು 50,000 ರೂ ಮೌಲ್ಯದ ಹೊಂಡಾ ಶೈನ್ ಬೈಕನ್ನು ಜಪ್ತಿ ಮಾಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಶಿರಸಿ ಮಾರುಕಟೆ ಪೊಲೀಸರು, ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ