Latest

ಮೆಗಾಸ್ಟಾರ್ ಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆದರೆ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.

ಆಚಾರ್ಯ ಸಿನಿಮಾ ಶೂಟಿಂಗ್ ಗೂ ಮೊದಲು ಕೋವಿಡ್ ಟೆಸ್ಟ್ ಮಾಡಿಸಿಕೊಂಡಾಗ ತಮಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಸ್ವತ: ಚಿರಂಜೀವಿ ತಿಳಿಸಿದ್ದಾರೆ.

ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Home add -Advt

Related Articles

Back to top button