ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾಷ್ಟ್ರ ರಾಜಧಾನಿಯಲ್ಲಿಯೂ ಪಟಾಕಿ ಬ್ಯಾನ್ ಮಾಡಲಾಗಿದ್ದು, ನ.30ರವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿ ಹಸಿರು ನ್ಯಾಯಮಂಡಳಿ ಆದೇಶ ನೀಡಿದೆ.
ದೆಹಲಿ ಮಾತ್ರವಲ್ಲ ದೆಹಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಪಟಾಕಿ ನಿಷೇಧ ಮಾಡಲಾಗಿದೆ. ವಾಯುಮಾಲಿನ್ಯ ಅಪಾಯದ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಹಾಗೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿ ಹಸಿರು ನ್ಯಾಯಮಂಡಳಿ ಆದೇಶ ನೀಡಿದೆ.
ಇದೇ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೀಪಾವಳಿಯಲ್ಲಿ ಪಟಾಕಿ ಹಚ್ಚದಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ