Karnataka NewsLatest
ಉಪಚುನಾವಣೆ ಕೌಂಟಿಂಗ್: ಜಯಚಂದ್ರ ಅಬ್ಸೆಂಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಶಿರಾ ಮತ್ತು ರಾಜರಾಜೇಶ್ವರಿ ನಗರಗಳ ಉಪಚುನಾವಣೆ ಮತ ಎಣಿಕೆ ಮಂಗಳವಾರ ನಡೆಯಲಿದೆ.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ -ಮೂರೂ ಪಕ್ಷಗಳು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ವಿಜಯೋತ್ಸವ, ಪಟಾಕಿ ಸಿಡಿತಗಳನ್ನು ನಿಷೇಧಿಸಲಾಗಿದೆ.
ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಳೆ ಕೌಂಟಿಂಗ್ ಸೆಂಟರ್ ಗೆ ಬರುವುದಿಲ್ಲ. ಅವರಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಪರೀತವಾಗಿ ಕೆಮ್ಮು ಬರುತ್ತಿರುವುದರಿಂದ ವೈದ್ಯರ ಸಲಹೆಯಂತೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಪತ್ನಿಗೆ ಕೊರೋನಾ ಸೋಂಕು ತಗುಲಿತ್ತು. ಹಾಗಾಗಿ ನಾನೂ ಪರೀಕ್ಷೆ ಮಾಡಿಸಿದೆ. ನನಗೂ ಸೋಂಕು ಪತ್ತೆಯಾಗಿದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.




