
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿರಾ ಹಾಗೂ ಆರ್.ಆರ್.ನಗರ ಉಪಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎಂಬುದು ನಿಚ್ಚಳವಾಗಿ ಗೊತ್ತಾಗಲಿದೆ.
ಈವರೆಗೆ ಎರಡೂ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಆರಂಭಿಕ ಮುನ್ನಡೆ ಪಡೆದಿದೆ.
ಆರ್.ಆರ್.ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹೆಚ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ಸ್ಪರ್ಧಿಸಿದ್ದಾರೆ. ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಕಣದಲ್ಲಿದ್ದಾರೆ.
ಈಗಾಗಲೇ ಆರ್.ಆರ್.ನಗರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ. ಶಿರಾದಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.