Latest

ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಭಾರೀ ಅಂತರದಿಂದ ಗೆಲುವು ಸಾಧಿಸಿರುವ ಮುನಿರತ್ನ ಆರ್.ಆರ್.ನಗರ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಗೆ ಜಯಗಳಿಸಿದ್ದಾರೆ.

Home add -Advt

ಬಿಜೆಪಿ ಅಭ್ಯರ್ಥಿ ಮುನಿರತ್ನ 103291 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 58734 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಮುನಿರತ್ನ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಮುನಿರತ್ನ ಗೆಲುವು ಸಾಧಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

Related Articles

Back to top button