Latest
ಕೋವಿಡ್ ಗೆ ಬಲಿಯಾದ ಮತ್ತೋರ್ವ ಬಿಜೆಪಿ ಶಾಸಕ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದ್ದು, ಮತ್ತೋರ್ವ ಬಿಜೆಪಿ ಶಾಸಕ ಮಹಾಮಾರಿಗೆ ಬಲಿಯಾಗಿದ್ದಾರೆ.
ಉತರಾಖಂಡ್ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್ ಪಾಸಿಟೀವ್ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ಸುರೇಂದ್ರ ಸಿಂಗ್ ಅವರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದರು.




