ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಅವರಿಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, ಮಾಜಿ ಮೇಯರ್ ಸಂಪತ್ ರಾಜ್ ಗೆ ಆಶ್ರಯ ನೀಡಿದ್ದ ರಿಯಾಜುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ. ರಿಯಾಜುದ್ದೀನ್ ಬಿಬಿಎಂಪಿ ಕಾಂಟ್ರ್ಯಾಕ್ಟರ್ ಆಗಿದ್ದರು ಎಂದು ತಿಳಿಸಿದ್ದಾರೆ.
ರಿಯಾಜುದ್ದೀನ್, ಸಂಪತ್ ರಾಜ್ ಅವರನ್ನು ನಾಗರಹೊಳೆ ಫಾರ್ಮ್ ಹೌಸ್ ಗೆ ಕರೆದುಕೊಂಡು ಹೋಗಿ ಅಲ್ಲಿ ಆಶ್ರಯ ನೀಡಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸುತ್ತಿದ್ದಂತೆಯೇ ಸಂಪತ್ ರಾಜ್ ಪೊಲೀಸರ ಕಣ್ತಪ್ಪಿಸಿ ಪರರಾರಿಯಾಗಿದ್ದಾರೆ. ಸಂಪತ್ ರಾಜ್ ಗಾಗಿ ಶೋಧ ಮುಂದುವರೆದಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ