Latest

ಬಿಹಾರ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆದಿರುವ ನಿತೀಶ್ 7ನೇ ಬಾರಿಗೆ ಹಾಗೂ ಸತತ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಿಹಾರ ರಾಜ್ಯಪಾಲ ಫಗು ಚೌಹಾಣ್, ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಭೋದಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಹಾಗೂ ರೇಣು ದೇವಿ ಪ್ರಮಾಣ ವಚನ ಸ್ವೀಕರಿಸಿದರೆ, ವಿಜಯ್ ಕುಮಾರ್ ಚೌದರಿ, ಅಶೋಕ್ ಚೌದರಿ, ವಿಜೇಂದ್ರ ಪ್ರಸಾದ್ ಯಾದವ್, ಮೇವಾ ಲಾಲ್ ಚೌದರಿಸೇರಿದಂತೆ ಜೆಡಿಯುನಿಂದ 5 ಹಾಗೂ ಬಿಜೆಪಿಯಿಂದ 5 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರೇರಿದಂತೆ ಹಲವರು ಉಪಸ್ಥಿತರಿದ್ದರು.

Bihar,Chief Minister Nitish kumar,oath

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button