ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರಧಿಕಾರ ರಚನೆ ಆದೇಶ ವಾಪಸ್ ಪಡೆಯದಿದ್ದರೆ ಕರ್ನಾಟಕ ಬಂದ್ ನಡೆಸುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶವನ್ನು ನವೆಂಬರ್ 27ರೊಳಗೆ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ರಾಝ್ಯಾದ್ಯಂತ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಮರಾಠ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ, ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ