ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹಾಜರಾಗದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಹೈಕೋರ್ಟ್ 5 ಲಕ್ಷ ರೂ ದಂಡ ವಿಧಿಸಿಸಿದೆ.
ಈಶ್ವರ್ ಖಂಡ್ರೆ ವಿರುದ್ಧ ಡಿ.ಕೆ ಸಿದ್ರಾಮ ಅವರು ಚುನಾವಣಾ ಅಕ್ರಮ ಹಾಗೂ ಆಸ್ತಿವಿವರ ಸಲ್ಲಿಸದ ಬಗ್ಗೆ ತಕರಾರು ಅರ್ಜಿ ಸಲ್ಲಿಸಿದ್ದರಲ್ಲದೇ ಅವರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ನೋಟೀಸ್ ನೀಡಿತ್ತು. ಆದರೆ ಖಂಡ್ರೆ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಖಂಡ್ರೆ ಅವರಿಗೆ 5 ಲಕ್ಷ ರೂ ದಂಡ ವಿಧಿಸಿದೆ. ಈ ಹಣವನ್ನು ಸಿಎಂ ಕೋವಿಡ್ ನಿಧಿಗೆ ಪಾವತಿಸುವಂತೆ ಸೂಚಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರ್ ಖಂಡ್ರೆ, ನನ್ನ ಪಿಎ ಗೆ ಮರೆವಿನ ರೋಗವಿದೆ. ಹೀಗಾಗಿ ವಿಚಾರಣೆಯ ದಿನಾಂಕ ನನ್ನ ಗಮನಕ್ಕೆ ಬಂದಿಲ್ಲ ಎಂದು ಕೋರ್ಟ್ ನಲ್ಲಿ ಮತೆ ಅರ್ಜಿ ಹಾಕಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ