Kannada NewsLatest

ಮಕ್ಕಳ ರಕ್ಷಣೆ ಎಲ್ಲರ ಹೊಣೆ: ನ್ಯಾಯಾಧೀಶ ಸಿ.ಎಂ.ಜೋಶಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಕ್ಕಳ ರಕ್ಷಣೆ, ಪೋಷಣೆ, ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ, ಮಕ್ಕಳ ರಕ್ಷಣೆಗೆ ಒಗ್ಗಟಾಗಿ ಕೆಲಸ ಮಾಡುವುದು ಅವಶ್ಯಕವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಮ್ ಜೋಶಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಸೇರಿದಂತೆ ವಿವಿಧ ಸ್ವಯಂಸೇವಾ ಸಂಸ್ಥೆಗಳ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬುಧವಾರ(ನ.18) ಮಕ್ಕಳ ಮಾಸಾಚರಣೆ ಬೃಹತ್ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್ ಸಾಂಕ್ರಾಮಿಕ ಮಹಾಮಾರಿ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ಪೋಷಣೆಗೆ ಸಂಬಂದಿಸಿದಂತೆ ಎಲ್ಲಾ ಇಲಾಖೆಗಳು ಉತ್ತಮ ಕರ್ತವ್ಯ ನಿರ್ವಹಣೆ ಮಾಡಿವೆ ಎಂದು ಅವರು ತಿಳಿಸಿದರು.

ಇದೇ ರೀತಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಯಾವುದೇ ರೀತಿಯ ಆಪತ್ತು ಅಥವಾ ಮಕ್ಕಳಿಗೆ ತೊಂದರೆ ಎದುರಾದಾಗ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಬೇಕು ಎಂದು ನ್ಯಾಯಾಧೀಶ ಸಿ.ಎಂ.ಜೋಶಿ ಅವರು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧ್ಯಕ್ಷತೆ ವಹಿಸಿದ್ದರು.

ಧ್ವನಿ ಮುದ್ರಿಕೆ ಬಿಡುಗಡೆ:
ಇದೇ ವೇಳೆ ಭಿಕ್ಷಾಟನೆ ತಡೆಗಟ್ಟುವಿಕೆಗೆ ಸಂಬಂದಿಸಿದಂತೆ ಧ್ವನಿ ಮುದ್ರಿಕೆಯನ್ನು ಉಪ ಪೋಲಿಸ್ ಆಯುಕ್ತರಾದ ಚಂದ್ರಶೇಖರ ನೀಲಗಾರ ಬಿಡುಗಡೆ ಮಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿ ವಿಜಯ ದೇವರಾಜ ಅರಸ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ರತ್ನಾಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button