Latest

ಮಾಜಿ ಸಚಿವೆ, ನಟಿ ಉಮಾಶ್ರೀ ಕಾರು ಅಪಘಾತ; ಇಬ್ಬರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮಾಜಿ ಸಚಿವೆ ಉಮಾಶ್ರೀ ಅವರ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಉಮಾಶ್ರೀ ಅವರ ಇನ್ನೋವಾ ಕಾರು ಎದುರಿನಿಂದ ಬಂದ ಮತ್ತೊಂದು ಕಾರಿಗೆ ಡಿಕ್ಕಿಹೊಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ವೈದ್ಯೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಅದೃಷ್ಟವಶಾತ್ ಕಾರಿನಲ್ಲಿ ಮಾಜಿ ಸಚಿವೆ, ನಟಿ ಉಮಾಶ್ರೀ ಇರಲಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button