Latest

ಶಾಲೆ ಆರಂಭದ ಬಗ್ಗೆ ಅಂತಿಮ ತೀರ್ಮಾನ: ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಪುನರಾರಂಭದ ಬಗ್ಗೆ ಇಂದು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದು, ಎಲ್ಲರ ಜೊತೆ ಚರ್ಚಿಸಿ ಈ ಕುರಿತು ತೀರ್ಮಾನಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಲೆ ಆರಂಭದ ಬಗ್ಗೆ ಇಂದು ಅಧಿಕಾರಿಗಳು ಹಾಗೂ ಸಚಿವರ ಸಭೆ ನಡೆಯಲಿದ್ದು, ಮಧ್ಯಾಹ್ನದ ವೇಳೆ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದರು.

Home add -Advt

ದೇಶದ ವಿವಿಧ ರಾಜ್ಯಗಳಲ್ಲಿ ಶಾಲೆ ಆರಂಭದಿಂದ ಕೋವಿಡ್ ಸಂಖ್ಯೆ ಹೆಚ್ಚಿದ್ದರಿಂದ ಶಾಲೆಗಳನ್ನು ಮತ್ತೆ ಮುಚ್ಚಲಾಗಿದೆ. ಈಗಾಗೇ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಕೊರೊನಾ ಸೋಂಕು ಹೆಚ್ಚಿದೆ. ಇದರ ಬೆನ್ನಲ್ಲೇ ಇದೀಗ ಶಾಲೆಗಳು ಆರಂಭವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Related Articles

Back to top button