ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಸೆಂಬರ್ ನಲ್ಲಿ 1ನೇತರಗತಿಯಿಂದ ಪಿಯುಸಿವರೆಗೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ. ಡಿಸೆಂಬರ್ ನಂತರ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ವರ್ಷ 1-8ನೇ ತರಗತಿವರೆಗೆ ಶಾಲೆ ಆರಂಭದ ಯೋಜನೆ ಇಲ್ಲ. ಝಿರೋ ಇಯರ್ ಎಂದು ಹೇಳಲಾಗಲ್ಲ ಬೇರೆ ಬೇರೆ ರೀತಿಯಲ್ಲಿ ತರಗತಿಗಳು ನಡೆಯುತ್ತೆ. ಆದರೆ ಶಾಲೆಗಳು ತೆರೆಯುವುದಿಲ್ಲ ಎಂದರು. ಖಾಸಗಿ ಶಾಲೆಗಳು ಎರಡನೇ ಅವಧಿ ಶುಲ್ಕ ಸಂಗ್ರಹದ ಬಗ್ಗೆ ಪ್ರಸ್ತಾಪ ಸಲ್ಲಿಸಿದ್ದಾರೆ. ಆದರೆ ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ ಎಂದರು.
ಎಸ್ ಎಸ್ ಎಲ್ ಸಿ ಹಾಗೂ ದ್ವಿತಿಯ ಪಿಯುಸಿ ಬೋರ್ಡ್ ಪರೀಕ್ಷೆ ಇರುವುದರಿಂದ ಶೀಘ್ರದಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗುತ್ತದೆ. ಎಸ್ ಎಸ್ ಎಲ್ ಸಿಯಲ್ಲಿ 9,59,566 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವವರಿದ್ದಾರೆ. ಇನ್ನು ದ್ವಿತೀಯ ಪಿಯುಸಿಯಲ್ಲಿ 5,70,126 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ