ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಹಾತ್ಮಾ ಗಾಂಧಿ ಮರಿ ಮೊಮ್ಮಗ ಸತೀಶ್ ಧುಪೇಲಿಯಾ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಧುಪೇಲಿಯಾ ತಮ್ಮ ಜೀವನದ ಬಹುಪಾಲನ್ನು ಫೋಟೋಗ್ರಾಫಿ ಹಾಗೂ ವಿಡಿಯೋಗ್ರಾಫಿ ಮಾಡುವುದರಲ್ಲಿಯೇ ಕಳೆದಿದ್ದರು.
ಸತೀಶ್ ಧುಪೇಲಿಯಾ ನ್ಯುಮೋನಿಯಾದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಮಾಹಾತ್ಮಾ ಗಾಂಧಿ ಅಭಿವೃದ್ಧಿ ಟ್ರಸ್ಟ್ ಸೇರಿ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಧುಪೆಲಿಯಾ ತಮ್ಮ ಸಹೋದರಿಯರಾದ ಎಂ.ಎಸ್.ಉಮಾ ಮತ್ತು ಕೀರ್ತಿ ಮೆನನ್ ಅವರನ್ನು ಅಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ