Latest

ಕುತೂಹಲ ಮೂಡಿಸಿದ ಬಿ.ಎಲ್.ಸಂತೋಷ್-ಸಿಎಂ ಯಡಿಯೂರಪ್ಪ ಭೆಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಬಿ.ಎಲ್.ಸಂತೋಷ್, ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಯಕರ ಈ ಭೇಟಿ ತೀವ್ರ ಕುತೂಹಲ ಕೆರಳಿಸಿದ್ದು, ಸಂಪುಟ ವಿಸ್ತರಣೆ ವಿಚಾರವಾಗಿ ರಾಷ್ಟ್ರೀಯ ನಾಯಕರಿಂದ ಸಮ್ಮತಿ ಅಥವಾ ಸಚಿವರ ಪಟ್ಟಿಯ ಕುರಿತಾಗಿ ಸಂದೇಶವನ್ನು ತಂದಿರಬಹುದೇ ಎಂಬ ಪ್ರಶ್ನೆ ಮೂಡಿದೆ.

Home add -Advt

ಈಗಾಗಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಬಿ.ಎಲ್.ಸಂತೋಶ್ ಅವರನ್ನು ಭೇಟಿಯಾಗಿ, ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಎಲ್ಲರಿಗೂ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ ಇದೀಗ ಸಂತೋಷ್ ಅವರು ನೇರವಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.

Related Articles

Back to top button