
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನವಾಗಿ ಸ್ಥಾಪಿಸಲಾಗಿರುವ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷರನ್ನಾಗಿ ಬಿ.ಎಸ್.ಪರಮಶಿವಯ್ಯ ಅವರನ್ನು ನೇಮಮಕ ಮಾಡಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರಿಗೆ ಸೂಚನೆ ನೀಡಿದ್ದು, ಬಿ.ಎಸ್.ಪರಮಶಿವಯ್ಯ ಅವರನ್ನು ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಬೆಂಗಳೂರು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಆದೇಶಿಸಿದ್ದಾರೆ.
ಇತ್ತೀಚೆಗೆ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ, 500 ಕೋಟಿ ರೂ ಅನುದಾನವನ್ನು ಘೋಷಿಸಲಾಗಿತ್ತು. ಇದೀಗ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ