ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಜೈಲಿನ ಆಸ್ಪತ್ರೆಗೆ ಸ್ಥಳಾಂತರಿಸಿ ಆಕ್ಸಿಜನ್ ಬೆಡ್ ನೀಡಲಾಗಿದೆ.
ಬಿಪಿ, ಶುಗರ್, ಹೃದಯಸಂಬಂಧಿ ಖಾಯಿಲೆಗಳಿಂದ ರೋಷನ್ ಬೇಗ್ ಬಳಲುತ್ತಿದ್ದರು. 3 ದಿನಗಳ ಹಿಂದೆ ಅವರನ್ನು ಸಿಬಿಐ ಬಂಧಿಸಿ ವಿಚಾರಣೆಗೊಳಪಡಿಸಿತ್ತು. ನಂತರ ನ್ಯಾಯಾಲಯ 14 ದಿನಗಳ ನ್ಯಾಯಂಗ ವಶಕ್ಕೆ ಒಪ್ಪಿಸಿದೆ.
ಈ ಮಧ್ಯೆ ರೋಷನ್ ಬೇಗ್ ಅವರನ್ನು ಇನ್ನಷ್ಟು ವಿಚಾರಣೆಗೊಳಪಡಿಸಬೇಕಿರುವುದರಿಂದ ತನ್ನ ವಶಕ್ಕೆ ನೀಡಬೇಕೆಂದು ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಲು ಮುಂದಾಗಿದೆ. ಇನ್ನೆರಡು ದಿನದಲ್ಲಿ ಸಿಬಿಐ ವಶಕ್ಕೆ ಕೋರಲಾಗುವುದು.
ಈ ಮಧ್ಯೆ ಐಪಿಎಸ್ ಅಧಿಕಾರಿ ಅಜಯ ಹಿಲೋರಿಗೂ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.
ಐಎಂಎ ವಂಚನೆ; ಐಪಿಎಸ್ ಅಧಿಕಾರಿಗೆ ಸಿಬಿಐ ನೋಟೀಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ