
ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಹಿರಿಯ ಕಾಂಗ್ರೆಸ್ ನಾಯಕ, ಸೋನಿಯಾ ಗಾಂಧಿ ಆಪ್ತರಾಗಿದ್ದ ಅಹ್ಮದ್ ಪಟೇಲ್ ನಿಧನರಾಗಿದ್ದಾರೆ.
ಅವರಿಗೆ 71 ವರ್ಷ ವಯ್ಸಾಗಿತ್ತು. ಕಳೆದ ಒಂದೂವರೆ ತಿಂಗಳಿನಿಂದ ಅವರು ಕರೋನಾದಿಂದ ಬಳಲುತ್ತಿದ್ದರು. ಗುರುಗ್ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಮಹತ್ವದ ಸ್ಥಾನ ಹೊಂದಿದ್ದ ಅಹ್ಮದ್ ಪಟೇಲ್ ಗಾಂಧಿ ಕುಟುಂಬಕ್ಕೂ ಹತ್ತಿರವಾಗಿದ್ದರು.
5 ಬಾರಿ ರಾಜ್ಯಸಭೆ ಸದಸಯ್ರಾಗಿ ಹಾದೂ 3 ಬಾರಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.