ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಶಾಲೆಗಳು ಆನ್ ಲೈನ್ ತರಗತಿ ಮುಂದುವರಿಸಲು ಸಮ್ಮತಿ ನೀಡಿದ್ದು, ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೂ ಆನ್ ಲೈನ್ ತರಗತಿ ಮುಂದುವರೆಸಲು ಒಪ್ಪಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಸಭೆಯಲ್ಲಿ ಖಾಸಗಿ ಶಾಲೆಗಳ ಮನವೊಲಿಕೆ ಮಾಡಲಾಗಿದ್ದು, ಸಧ್ಯಕ್ಕೆ ಆನ್ ಲೈನ್ ತರಗತಿಗಳನ್ನು ಮುಂದುವರೆಸಲು ಸಮ್ಮಿತಿ ಸೂಚಿಸಿವೆ ಎಂದು ಹೇಳಿದರು.
ಇದೇ ವೇಳೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೋವಿಡ್ ನಿಂದಾಗಿ ಶಾಲೆಗಳು ಅನುಭವಿಸುತ್ತಿರುವ ನಷ್ಟಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಂದೆ ಹಲವು ಬೇಡಿಕೆ ಇಟ್ಟಿವೆ. ಈ ಬಗ್ಗೆ ಚರ್ಚಿಸಿ ನಿರ್ಧರಿಸುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ