
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಆತ್ಮಹತ್ಯೆ ಯತ್ನದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದು, ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ರಹಸ್ಯ ವಿಡಿಯೋ ಕಾರಣ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಒಂದು ವೈಯಕ್ತಿಕ ರಹಸ್ಯ ವಿಡಿಯೋ ಎತ್ತಿಕೊಂಡು ಹೋಗಿ ಎಂಎಲ್ ಸಿ ಹಾಗು ಸಚಿವರಿಗೆ ನೀಡಿದ್ದಾರೆ. ಆ ಸಚಿವ ಹಾಗೂ ಎಂಎಲ್ ಸಿ ಇಬ್ಬರೂ ಸಂತೋಷ್ ಹಾಗೂ ಸಿಎಂ ಇಬ್ಬರಿಗೂ ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಾರೆ ಎಂಬ ಮಾಹಿತಿ ಕಳೆದ ಎರಡು ಮೂರು ತಿಂಗಳ ಹಿಂದೆಯೇ ಕೇಳಿಬಂದಿತ್ತು ಎಂದಿದ್ದಾರೆ.
ಅಲ್ಲದೇ ಆ ರಹಸ್ಯ ವಿಡಿಯೋವನ್ನು ವರಿಷ್ಠರಿಗೂ ಕೊಡಲಾಗಿದೆ ಎಂಬ ಸುದ್ದಿಯೂ ಇತ್ತು. ಇದೆಲ್ಲ ಕಾರಣಗಲಿಗೆ ಬೇಸರವಾಗಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರಬಹುದು. ಆದರೆ ಸತ್ಯಾಸತ್ಯತೆ ಏನು ಎಂಬುದು ಸರಿಯಾಗಿ ಗೊತ್ತಿಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ