Latest

ಪೇಸ್ಟ್ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೇಸ್ಟ್ ರೂಪದಲ್ಲಿ ಅಕ್ರಮವಾಗಿ ತರಲಾಗಿದ್ದ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೊರಿಯರ್ ಮೂಲಕ ಚಿನ್ನವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದಾಗ ಪೇಸ್ಟ್ ರೂಪದಲ್ಲಿದ್ದ ಚಿನ್ನ ಪತ್ತೆಯಾಗಿದೆ.

ಇದೇ ವೇಳೆ ಕೇರಳದ ಕೋಝಿಕೋಡ್ ನಲ್ಲಿ ಕೂಡ ಅಕ್ರಮ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, 1.6 ಕಿಲೋ ಚಿನ್ನ ಜಪ್ತಿಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button