Kannada NewsKarnataka NewsLatest

ಸೋಮವಾರ ರಾತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಗೆ

ಮಂಗಳವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೋಮವಾರ ರಾತ್ರಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ 10 ಗಂಟೆಗೆ ಆಗಮಿಸಲಿರುವ ಅವರು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿ ಮಂಗಳವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಂಗಳವಾರ ಬೆಳಗ್ಗೆ 9 ಗಂಟೆಗೆ ಕಂಗ್ರಾಳಿಯ ಕೆಎಸ್ಆರ್ ಪಿ ಮೈದಾನದಲ್ಲಿ ಕೆಎಸ್ ಆರ್ ಪಿ 6ನೇ ತಂಡದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಬೊಮ್ಮಾಯಿ ಪಾಲ್ಗೊಳ್ಳುವರು.

11.30ಕ್ಕೆ ಕಾಲೇಜು ರಸ್ತೆಯಲ್ಲಿ ಪೊಲೀಸ್ ಕಮಿಶನರ್ ಕಚೇರಿಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 4 ಗಂಟೆಗೆ ಕಿತ್ತೂರಿನಲ್ಲಿ ಪೊಲೀಸ್ ಸಿಬ್ಬಂದಿ ವಸತಿಗೃಹಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಜೊತೆಗೆ ಟೆಎಪಿಸಿಎಂಎಸ್ ಗೆ ಭೇಟಿ ನೀಡುವರು. ನಂತರ ಅಲ್ಲಿಂದ ಹುಬ್ಬಳ್ಳಿಗೆ ತೆರಳುವರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button