ಪ್ರಗತಿವಾಹಿನಿ ಸುದ್ದಿ; ಹುಕ್ಕೇರಿ: ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ದೇವರ ಮುಂದೆ ಆಣೆ, ಪ್ರಮಾಣ ಮಾಡಿ ತಪ್ಪು ಮಾಡಿದ್ದಕ್ಕೆ ನ್ಯಾಯದೇವತೆಯೇ ಶಿಕ್ಷೆ ನೀಡಿದ್ದಾಳೆ ಎಂದು ಹೇಳಿಕೆ ನೀಡಿದ್ದ ಸಾ.ರಾ ಮಹೇಶ್ ಗೆ ತಿರುಗೇಟು ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯದ ಮುಂದೆ ಯಾವ ಶಾಪವೂ ನಡೆಯಲ್ಲ ಎಂದು ಲೇವಡಿ ಮಾಡಿದ್ದಾರೆ.
ಹುಕ್ಕೇರಿಯಲ್ಲಿ ಮಾತನಾಡಿದ ಜಾರಕಿಹೊಳಿ, ಹೆಚ್ ವಿಶ್ವನಾಥ್ ಅನರ್ಹತೆ ವಿಚಾರವಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದಿದ್ದಾರೆ.
ನಾವು 17 ಜನರೂ ಒಟ್ಟಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಅಸಮಾಧಾನವಿಲ್ಲ. ನಾವೆಲ್ಲರೂ ವಿಶ್ವನಾಥ್ ಜೊತೆಗಿದ್ದು, ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ