ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಅನುಮಾನಗಳು ಮೂಡುತ್ತಿದ್ದು, ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ.
ನವೆಂಬರ್ 25ರಂದು ಅಪಹರಣಕ್ಕೀಡಾಗಿದ್ದ ವರ್ತೂರು ಪ್ರಕಾಶ್, ವಾರದ ಬಳಿಕ ಬೆಂಗಳೂರಿನಲ್ಲಿ ದೂರು ದಾಖಲಿಸುತ್ತಿರುವುದು ಹಲವು ಶಂಕೆಗೆ ಕಾರಣವಾಗಿದೆ. ಅಲ್ಲದೇ ವರ್ತೂರು ಪ್ರಕಾಶ್ ಅವರ ಕಾರು ಬೆಂಗಳೂರಿನ ಬೆಳ್ಳಂದೂರು ಬಳಿ ನಿನ್ನೆ ಪತ್ತೆ ಪತ್ತೆಯಾಗಿದ್ದು, ಇದೀಗ ಆ ಕಾರಿನಲ್ಲಿ ಯುವತಿಯ ದುಪ್ಪಟ್ಟ ಮಾದರಿಯ ಬಟ್ಟೆ ಸಿಕ್ಕಿರುವುದು ಇನ್ನಷ್ಟು ಅನುಮಾನಗಳನ್ನು ಹೆಚ್ಚಿಸಿದೆ.
ವರ್ತೂರು ಪ್ರಕಾಶ್ ಹೇಳಿರುವ ಪ್ರಕಾರ, ಕಾರನ್ನು ಅಡ್ಡಗಟ್ಟಿ ಕಾರಿನ ಗಾಜು ಒಡೆದು, ಹಲ್ಲೆ ನಡೆಸಿ, ತನಗೆ ಮಂಕಿ ಕ್ಯಾಪ್ ಹಾಕಿ ಕಿಡ್ನ್ಯಾಪ್ ಮಾಡಿದ್ದಾರೆ ಎಂದಿದ್ದರು. ಆದರೆ ಪತ್ತೆಯಾಗಿರುವ ಕಾರಿನ ಯಾವುದೇ ಗಾಜು ಒಡೆದಿಲ್ಲ ಎನ್ನಲಾಗಿದೆ. ಇದೇ ವೇಳೆ ಕಾರಿನಲ್ಲಿ ವೇಲ್ ಮಾದರಿಯ ಬಟ್ಟೆ ಹಲವು ಅನುಮಾನಕ್ಕೆ ಕಾರಣವಾಗಿದೆ. ವರ್ತೂರು ಅವರನ್ನು ಹನಿ ಟ್ರ್ಯಾಪ್ ಮೂಲಕ ಬಲೆಗೆ ಕೆಡವಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರೆ ಎಂಬ ಶಂಕೆ ಮೂಡಿದ್ದು, ಕಿಡ್ನ್ಯಾಪ್ ಪ್ರಕರಣದ ಸುತ್ತ ಅನುಮಾನಗಳ ಹುತ್ತ ಆರಂಭವಾಗಿದೆ. ಪೊಲೀಸರ ತನಿಖೆಯಿಂದಷ್ಟೇ ಸತ್ಯಾಸತ್ಯತೆ ಗೊತ್ತಾಗಲಿದೆ.
ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್: ಎಸೆದು ಹೋದ ಕಿಡ್ನ್ಯಾಪರ್ಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ