ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ- ಚಿಕ್ಕೋಡಿ ಕೇಶವ ಕಲಾಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಭಾಗವಹಿಸಿ, ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದರು.
ಮನೆ ಬೆಳಗುವ ಹೆಣ್ಣು ಮಕ್ಕಳಿಗೆ ನಮ್ಮ ಪಕ್ಷ, ‘ಮಹಿಳಾ ಮೋರ್ಚಾ’ ಎಂಬ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದೆ. ಹೀಗಾಗಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಗ್ರಾ.ಪಂ. ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು. ಈ ಮೂಲಕ ಗ್ರಾಮೀಣ ಭಾಗಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲು ಪಣತೊಡೋಣ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಣ್ಣು ಮಕ್ಕಳ ಪ್ರಗತಿಗಾಗಿ ಜಾರಿಗೆ ತಂದ ಸುಕನ್ಯಾ ಸಮೃದ್ಧಿ ಯೋಜನೆ, ಭೇಟಿ ಬಚಾವೋ- ಭೇಟಿ ಪಡಾವೋ ಹೀಗೆ ಹಲವು ಯೋಜನೆಗಳು ಬಡ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾಗುತ್ತಿದೆ. ಹೀಗಾಗಿ ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿ ಜತೆಗೆ ಸರ್ಕಾರದ ಎಲ್ಲಾ ಜನಪರ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸಕ್ಕೆ ನಮ್ಮೊಂದಿಗೆ ನೀವೆಲ್ಲರೂ ಕೈಜೋಡಿಸಬೇಕು ಎಂದು ಸಂದೇಶ ನೀಡಿದರು.
ಈ ಸಭೆಯಲ್ಲಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಗೀತಾ ವಿವೇಕಾನಂದ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಚಂದಮ್ಮಾ ಪಾಟೀಲ, ಶಿಲ್ಪಾ ಸುವರ್ಣ, ರಾಜ್ಯ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಪ್ರೇಮಾ ಭಂಡಾರಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶಾಂಭವಿ ಅಶ್ವತಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ ಅಪ್ಪಾಜಿಗೋಳ, ಮಹಿಳಾ ಮೋರ್ಚಾದ ಸದಸ್ಯರು, ಕಾರ್ಯದರ್ಶಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ