Kannada NewsLatest

ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಹತ್ವದ ನಿರ್ಣಯ

Home add -Advt

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಮುಖವಾಗಿ ಮೂರು ನೀರ್ಣಯಗಳನ್ನು ಕೈಗೊಳ್ಳಲಾಗಿದೆ.

ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲು, ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಮತ್ತು ಸಚಿವ ಆರ್ ಅಶೋಕ, ಬಿಜೆಪಿ ಕಾರ್ಯಕಾರಿಣಿಯಲ್ಲಿ ಮೂರು ಪ್ರಮುಖ ನಿರ್ನಯ ಕೈಗೊಳ್ಳಲಾಗಿದ್ದು, ಗೋಹತ್ಯೆ ನಿಷೇಧ, ಲವ್ ಜಿಹಾದ್ ನಿಷೇಧ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ನಿರ್ಣಯ ಕೈಗೊಳ್ಳಲಾಗಿದೆ.

ಎರಡನೇಯದಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.80ರಷ್ಟು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದಕ್ಕೆ ನಿರ್ಣಯ ಕೈಗೊಳ್ಳಲಾಗಿದೆ. ಮೂರನೇಯದಾಗಿ ಸಂಘಟನಾತ್ಮಕ ನಿರ್ಣಯ- ಪಕ್ಷದಲ್ಲಿ ಶಿಸ್ತು ಸಮಿತಿ ಮತ್ತು ಚುನಾವಣಾ ಸಮಿತಿ ರಚನೆ ಮಾಡುವ ಅಧಿಕಾರ ರಾಜ್ಯಾಧ್ಯಕ್ಷರಿಗೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸವರ್ಷಾಚರಣೆಗೆ ಷರತ್ತುಗಳನ್ನು ವಿಧಿಸಲಾಗುವುದು ಎಂದು ಸಚಿವ ಆರ್.ಅಶೋಕ ತಿಳಿಸಿದರು.

Related Articles

Back to top button