
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯದಿದ್ದರೆ ರಾಷ್ಟ್ರದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಖೇಲ್ ರತ್ನ ವಾಪಸ್ ನೀಡುವುದಾಗಿ ಬಾಕ್ಸರ್ ವಿಜೇಂದರ್ ಸಿಂಗ್ ತಿಳಿಸಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದ್ದು, ರೈತರ ಮನವೊಲಿಕೆಗೆ ಕೇಂದ್ರ ಸರ್ಕಾರ ನಡೆಸಿರುವ ಹಲವು ಸಂಧಾನ ಸಭೆಗಳು ವಿಫಲವಾಗಿವೆ. ರೈತರ ಹೋರಾಟಕ್ಕೆ ಬಾಲಿವುಡ್ ನಟ-ನಟಿಯರು, ಕ್ರೀಡಾಪಟುಗಳು ಸಾಥ್ ನೀಡಿದ್ದಾರೆ.
ದೆಹಲಿ-ಹರಿಯಾಣ ಸಿಂಗಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಬಾಕ್ಸರ್ ವಿಜೇಂದರ್ ಸಿಂಗ್, ಕೇಂದ್ರ ಸರ್ಕಾರ ಕೃಷಿ ಕಾನೂನು ಹಿಂಪಡೆಯದಿದ್ದರೆ ಖೇಲ್ ರತ್ನ ವಾಪಸ್ ನೀಡುವುದಾಗಿ ಘೋಷಿಸಿದ್ದಾರೆ.
ರೈತರ ಹೋರಾಟಕ್ಕೆ ಬೆಂಬಲ ನೀಡಿರುವ ಮಾಜಿ ಬಾಕ್ಸಿಂಗ್ ತರಬೇತುದಾರ ಗುರ್ಭಕ್ಷ ಸಿಂಗ್ ಸಂಧು, ದ್ರೋಣಾಚಾರ್ಯ ಪ್ರಶಸ್ತಿ ಹಿಂದಿರುಗಿಸುವುದಾಗಿ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ