ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕ ಮಂದಿಸಿದರು. ವಿಧೇಯಕ ಪ್ರಸ್ತಾಪಿಸುತ್ತಿದ್ದಂತೆಯೇ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗದ್ದಲ ಕೋಲಾಹಲದ ನಡುವೆಯೇ ವಿಧೇಕವನ್ನು ಅಂಗೀಕರಿಸಲಾಯಿತು.
ಗೋಹತ್ಯೆ ನಿಷೇಧ ಮಸೂದೆಯ ಪ್ರಮುಖ ಅಂಶಗಳು:
* ಹಸು, ಕರು, ದನ, ಎಮ್ಮೆಗಳ ಹತ್ಯೆ ನಿಷೇಧ ಮಾಡಲಾಗಿದ್ದು, ಗುಜರಾತ್, ಉತ್ತರ ಪ್ರದೇಶ ಮಾದರಿಯಲ್ಲಿ ಕಾಯ್ದೆ ಜಾರಿ
* ಗೋಹತ್ಯೆಗೆ 50,000ದಿಂದ 5 ಲಕ್ಷವರೆಗೆ ದಂಡ, 3ರಿಂದ 7 ವರ್ಷವರೆಗೆ ಜೈಲು ಶಿಕ್ಷೆ
* 13 ವರ್ಷ ಮೇಲ್ಪಟ್ಟ ಎಮ್ಮೆಗಳ ಹತ್ಯೆಗೆ ಸಮ್ಮತಿ
* ಕೃಷಿ ಹಾಗೂ ಪಶುಸಂಗೋಪನೆ ಉದ್ದೇಶಕ್ಕಾಗಿ ಗೋಸಾಟಕ್ಕೆ ಅಧಿಕಾರಿಗಳ ಅನುಮತಿ ಅಗತ್ಯವಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಸಾಗಾಟ ಮಾಡಬೇಕು. ನಿಯಮ ಉಲ್ಲಂಘನೆ ಮಾಡಿದರೆ 3 ವರ್ಷದಿಂದ 5 ವರ್ಷದ ವರೆಗೆ ಜೈಲು, 50 ಸಾವಿರ ದಂಡ ವಿಧಿಸಲಾಗುವುದು ಸೇರಿದಂತೆ ಹಲವು ಅಂಶಗಳನ್ನು ಒಳಗೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ