ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬಸ್ ಸಂಚಾರ ಸ್ತಬ್ಧಗೊಂಡಿದೆ.
ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದಾರೆ. ಇದರಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ.
ತಮ್ಮ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರು ಮಧ್ಯಾಹ್ನ 12 ಗಂಟೆ ಗಡುವು ನೀದಿದ್ದು, ಸರ್ಕಾರ ಸ್ಪಂದಿಸದಿದ್ದರೆ ಡಿಪೋ ಬಿಟ್ಟು ಫ್ರೀಡಂ ಪಾರ್ಕ್ ಗೆ ತೆರಳಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ