
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಪ್ರತಿಭಟನೆ ಮುಂದುವರೆದಿದ್ದು, ರಾಜ್ಯವ್ಯಾಪಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದೂ ಕೂಡ ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಕೆಎಸ್ ಆರ್ ಟಿಸಿ, ಬಿಎಂಟಿಸಿ, ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ರಾಜ್ಯಾದ್ಯಂತ ಮುಷ್ಕರ ಆರಂಭಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಬಹುತೇಕ ಡಿಪೋಗಳು ಬಣಗುಡುತ್ತಿದ್ದು, ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದಾರೆ.
ಈ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕ್ಯಾಬ್, ಆಟೋ, ಖಾಸಗಿ ಬಸ್ ಗಳು ದುಪ್ಪಟ್ಟು ಹಣ ಪಡೆದು ವಸೂಲಿಗೆ ಮುಂದಾಗಿವೆ.