ಹುಬ್ಬಳ್ಳಿ: ಪರಿಚಿತನೊಬ್ಬ ಯುವತಿಗೆ ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಮಲ್ಲಿಕಜಾನ್ ಬಗಡಗೇರಿ ಆರೋಪಿ. ಸಧ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 19 ವರ್ಷದ ಯುವತಿ ಹುಬ್ಬಳ್ಲಿಯ ಬಾಸಲ್ ಮಿಷನ್ ಚರ್ಚ್ ಬಳಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಆಗಮಿಸಿದ ಮಲ್ಲಿಕಜಾನ್ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾನೆ.
ದುರ್ಗದ ಬೈಲ್ ಗೆ ಯುವತಿಯನ್ನು ಬಿಡುವ ಬದಲು ಕಾರವಾರ ರಸ್ತೆ ಕಡೆಗೆ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಯುವತಿಯನ್ನು ವಾಪಸ್ ಕರೆದುಕೊಂಡು ಬರುವ ವೇಳೆ ಅಪಘಾತಕ್ಕೀಡಾಗಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಗಾಯಾಳು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ಯುವತಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ವಿವರಿಸಿದ್ದಾಳೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ