Kannada NewsLatest

ಗ್ರಾಮ ಪಂಚಾಯತಿ ಚುನಾವಣೆ: ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ.

ವೀಕ್ಷಕರು, ದಿನಾಂಕ:11.12.2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು.

ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. ಇವರ ದೂರವಾಣಿ ಸಂಖ್ಯೆ 9480881000 ಹಾಗೂ ಇವರ ಇ-ಮೇಲ್ : [email protected] ಇರುವುದು.

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂದಪಟ್ಟಂತೆ ಯಾವುದಾದರೂ ದೂರುಗಳು ಇದ್ದಲ್ಲಿ ಚುನಾವಣಾ ವೀಕ್ಷಕರನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button