
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿಧಾನಮಂಡಳದ 142ನೆ ಅಧಿವೇಶನದ ಉಪಾಧಿವೇಶನ ಮಂಗಳವಾರ ನಡೆಯಲಿದೆ.
ಅಂದು ವಿಧಾನಪರಿಷತ್ತಿನ ಅಧಿವೇಶನವನ್ನು ಮಾತ್ರ ಕರೆಯಲಾಗಿದೆ.
ವಿಧಾನಪರಿಷತ್ತಿನಲ್ಲಿ ಸಭಾಪತಿ ವಿರುದ್ಧ ಅವಿಶ್ವಾಸ ಮಂಡಿಸಲು ಬಿಜೆಪಿ ಪ್ರಯತ್ನ ನಡೆಸಿತ್ತು. ಆದರೆ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅಧಿವೇಶನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದ್ದರು.
ವಿಧಾನಪರಿಷತ್ ಸಭಾಪತಿ ಸ್ಥಾನವನ್ನು ಬಿಜೆಪಿ ಪಡೆಯಲು ಕಸರತ್ತು ನಡೆಸಿದೆ. ಜೆಡಿಎಸ್ ನೆರವಿನೊಂದಿಗೆ ಪಡೆಯಬಹುದು
ನಂತರ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ