Kannada NewsLatest

ಸಂವಹನ ಕೌಶಲ್ಯಗಳ ಕುರಿತು ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜು ಇಂಗ್ಲೀಷ್ ವಿಭಾಗದ ವತಿಯಿಂದ ಜಾಗತಿಕ ಸಾಮರ್ಥ್ಯಕ್ಕಾಗಿ ಸಂವಹನ ಕೌಶಲ್ಯಗಳ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿ ಪ್ರೊ.ಎಂ.ರಾಮಚಂದ್ರ ಗೌಡ ಅವರು ಕಾರ್ಯಾಗಾರ ಉದ್ಘಾಟಿಸಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಂವಹನ ಕೌಶಲ್ಯಗಳು ಮಹತ್ವವಾಗಿರುತ್ತದೆ ಎಂದರು. ಇಂದಿನ ಯುವ ಪದವೀಧರರಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ಸಮಯದ ಅವಶ್ಯಕತೆಯಾಗಿದೆ ಎಂದರು.

ಪ್ರಾಂಶುಪಾಲರು ಮತ್ತು ಕಾರ್ಯಕ್ರಮ ನಿರ್ದೇಶಕರಾದ ಪ್ರೊ.ಎಂ.ಜಯಪ್ಪ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗ ಮಾರುಕಟ್ಟೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಬೇಕಾಗಿರುವುದರಿಂದ ಇಂತಹ ತರಬೇತಿ ಕಾರ್ಯಕ್ರಮಗಳಿಂದ ಲಾಭ ಪಡೆಯುವಂತೆ ಕೇಳಿಕೊಂಡರು.

ಈ ಸಂದರ್ಭದಲ್ಲಿ ಕೆಪಿಎಸ್‌ಸಿ ಸದಸ್ಯ ಡಾ.ಎಂ.ಬಿ.ಹೆಗ್ಗನ್ನವರ್ ಮತ್ತು ಆರ್‌ಸಿಯು ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷ ಪ್ರೊ.ಶ್ರೀನಿವಾಸ್ ಗೌಡ ಮತ್ತು ಕರ್ನಾಟಕ ಕಾಲೇಜು ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಡಾ.ಎಂ.ಬಿ.ಸಂಗಪುರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ಕನ್ವೀನರ್ ಡಾ.ಕವಿತಾ ಕುಸುಗಲ್ ಅತಿಥಿಗಳನ್ನು ಸ್ವಾಗತಿಸಿದರು, ಡಾ. ಕನಕಪ್ಪ ಪೂಜರ್ ಅತಿಥಿಗಳು ಮತ್ತು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು, ಶ್ರೀ ಸುರೇಶ್ ಗಂಗೋತ್ರಿ ಅವರು ಧನ್ಯವಾದಗಳನ್ನು ಅರ್ಪಿಸಿದರು. ಡಾ.ಜೋತಿ ಪಾಟೀಲ್ ಕಾರ್ಯಕ್ರಮವನ್ನು ಸಂಯೋಜಿಸಿದರು, ಮತ್ತು ಶ್ರೀ ಸಂತೋಷ್ ರಜಪೂತ್, ಡಾ.ಫಯಾಜ್ ಇಲಕಲ್, ಡಾ.ರಮೇಶ್ ಎಂ.ಎನ್, ಡಾ.ಜಗದೀಶ್ ಗಸ್ತಿ ಅವರು ಕಾರ್ಯಾಗಾರದ ಆನ್‌ಲೈನ್ ಭಾಗಕ್ಕೆ ತಾಂತ್ರಿಕ ನೆರವು ನೀಡಿದರು. ಕಾರ್ಯಾಗಾರದಲ್ಲಿ ರಾಷ್ಟ್ರದಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button