Latest

ಐಐಟಿ ಮದ್ರಾಸ್ ನಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಐಐಟಿ ಮದ್ರಾಸ್ ಕಾಲೇಜಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, 66 ವಿದ್ಯಾರ್ಥಿಗಳು ಹಾಗೂ 5 ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಐಐಟಿ ಮದ್ರಾಸ್ ನಲ್ಲಿ ಕಳೆದ ಮೂರು ದಿನಗಳಲ್ಲಿ 55 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿನ ಲಕ್ಷಣ ಕಂಡುಬಂದಲ್ಲಿ ತಕ್ಷಣ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಲಾಗಿದೆ. ಶಿಕ್ಷಣ ಸಂಸ್ಥೆಯ ಎಲ್ಲಾ ವಿಭಾಗಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳು ಸಿಬ್ಬಂದಿಗಳು ತಮ್ಮ ಹಾಸ್ಟೇಲ್ ನಲ್ಲೇ ಕ್ವಾರಂಟೈನ್ ಆಗಲು ಸೂಚಿಸಲಾಗಿದೆ. ಹೊರಗಿನಿಂದ ಬರುವ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳಿಗೆ ವರ್ಕ್ ಫ್ರಂ ಹೋಂ ಗೆ ಅವಕಾಶ ನೀಡಲಾಗಿದೆ.

ಡಿಸೆಂಬರ್ 7ರಿಂದ ಐಐಟಿ ಮದ್ರಾಸ್ ನಲ್ಲಿ ಫೈನಲ್ ಇಯರ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಲು ತಮಿಳುನಾಡು ಸರ್ಕಾರ ಅವಕಾಶ ನೀಡಿತ್ತು. ಇದೀಗ ಶಿಕ್ಷಣ ಸಂಸ್ಥೆಯಲ್ಲಿ 66 ವಿದ್ಯಾರ್ಥಿಗಳು ಹಾಗೂ 5 ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button