Latest

ಬಿಜೆಪಿ ಶಾಸಕರ ಕಾರು ಅಪಘಾತ; ಇಬ್ಬರು ಸಾವು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಿಜೆಪಿ ಶಾಸಕ ಕಿಶನ್ ಕ್ಯಾಥೋರ್ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ಟಿಟ್ವಾಲಾದಲ್ಲಿ ನಡೆದಿದೆ.

ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಬೈಕ್ ಸವಾರರಾದ ಅಮಿತ್ ಸಿಂಗ್ (22), ಇಮ್ರಾನ್ ಸಿಂಗ್ (18) ಎಂದು ಗುರುತಿಸಲಾಗಿದೆ. ಅಮಿತ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಮ್ರಾನ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮುರ್ಬಾದ್ ಕ್ಷೇತ್ರದ ಶಾಸಕ ಕ್ಯಾಥೋರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಸಕರ ಕಾರು ಚಾಲಕನಿಗೆ ಗಾಯಗಳಾಗಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button