Latest

ನಡೆದು ಹೋಗುತ್ತಿದ್ದವರ ಮೇಲೆ ಹರಿದ ಲಾರಿ; ನಾಲ್ವರು ಮಕ್ಕಳ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ನಡೆದು ಹೋಗುತ್ತಿದ್ದ ಜನರ ಗುಂಪಿನ ಮೇಲೆ ಲಾರಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಧಾರುಣ ಘಟನೆ ಆಂಧ್ರಪ್ರದೇಶದ ಕರ್ನೂಲಿನಲ್ಲಿ ಸಂಭವಿಸಿದೆ.

ಮೃತ ಮಕ್ಕಳನ್ನು ಝಾನ್ಸಿ, ವಂಶಿ, ಹರ್ಷವರ್ಧನ್ ಹಾಗೂ ಸುಶ್ಮಿತಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಚಾಲಕನ ಅಜಾಗರುಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button