ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾಗಮ ಯೋಜನೆಯನ್ನು ಮತೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಹೈಕೋರ್ಟ್ ಅಪೇಕ್ಷೆಯ ಅನುಸಾರ ಹೊಸ ರೀತಿಯಲ್ಲಿ ವಿದ್ಯಾಗಮ ಯೋಜನೆ ಜಾರಿ ಮಾಡಲು ನಿರ್ಧರಿಸಲಾಗಿದ್ದು, ಯೋಜನೆಯಲ್ಲಿ ಹಲವು ಬದಲಾವಣೆ ಮಾಡಿ ಸರ್ಕಾರಿ ಅನುದಾನ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ಪಾಠ ಮಾಡಲು ತೀರ್ಮಾನಿಸಲಾಗಿದೆ.
ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ, ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ಪಡೆದು ವಿದ್ಯಾಗಮ ಯೋಜನೆ ಪುನರಾರಂಭಿಸಲಾಗುವುದು ಎಂದು ಹೇಳಿದ್ದಾರೆ.
ವಿದ್ಯಾಗಮ ಯೋಜನೆಯಿಂದಾಗಿ ಶಿಕ್ಷರು ಹಾಗೂ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ