ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಉಂಟಾದ ದುರಂತದ ಬಗ್ಗೆ ಇದೀಗ ಅಧಿಕಾರಿಗಳ ತಂಡ ಕಾರಣ ಪತ್ತೆ ಹಚ್ಚಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಕೊಡಗು ಜಿಲ್ಲೆ ತಲಕಾವೇರಿ ಬೆಟ್ಟ ಅತಿ ಮಳೆ ಬೀಳುವ ಪ್ರದೇಶ. ಇಲ್ಲಿ ಇಂಗು ಗುಂಡಿ ನಿರ್ಮಾಣ ಮಾಡಿರುವುದರಿಂದ ಅಂತರ್ಜಲ ಹೆಚ್ಚಾಗಿ ಮಣ್ಣು ಕುಸಿದಿದೆ. ಭಾರೀ ಮಳೆಯಿಂದಾಗಿ ಬೆಟ್ಟ ಕುಸಿದು ದುರಂತ ಸಂಭವಿಸಿದೆ. ಅಲ್ಲದೇ ರಸ್ತೆ ಕಾಮಗಾರಿಯಿಂದಾಗಿ ಕುಡ ಬೆಟ್ಟದ ಮೇಲೆ ಒತ್ತಡ ಹೆಚ್ಚಿದೆ. ಅಧಿಕಾರಿಗಳ ವರದಿ ಪ್ರಕಾರ ತಲಕಾವೇರಿಯಲ್ಲಿ ಮತ್ತೆ ಸಮಸ್ಯೆಯಾಗುವ ಸಾಧ್ಯತೆ ಇದೆ.
ಆಗಸ್ಟ್ 5ರಂದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ಅರ್ಚಕರ ಕುಟುಂಬದ ಐವರು ಸಾವನ್ನಪ್ಪಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ