ಪ್ರಗತಿವಾಹಿನಿ ಸುದ್ದಿ; ಇಟಾನಗರ: ಅಪ್ರಾಪ್ತ ಬಾಲಕಿ ಮೇಲೆ ಪ್ರಾಂಶುಪಾಲ ಅತ್ಯಾಚಾರವೆಸಗಿರುವ ಘಟನೆ ಅರುಣಾಚಲ ಪ್ರದೇಶದ ರಾಗದಲ್ಲಿ ಬೆಳಕಿಗೆ ಬಂದಿದೆ.
14 ವರ್ಷದ ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲ ಅತ್ಯಾಚಾರವೆಸಗಿದ್ದು, ಆರೋಪಿ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಿಗೆ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿ ಸಂತ್ರಸ್ತೆ ಕುಟುಂಬಸ್ಥರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿ ಹೆಂಗೊ ಬಸರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ