ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಮೋತಿಲಾಲ್ ವೋರಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮೋತಿಲಾಲ್ ವೋರಾ ಅವರನ್ನು ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಹಲವು ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದ ವೋರಾ 1968ರಲ್ಲಿ ರಾಜಕೀಯ ಪ್ರವೇಶಿಸಿದ್ದರು. 1970ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1985ರಲ್ಲಿ ವೋರಾ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 1988ರಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ